
ಪ್ರಗತಿವಾಹಿನಿ ಸುದ್ದಿ; ಲಖನೌ: ಅಸ್ಮೋಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ ನಡೆದ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಈ ನಡುವೆ ಬಿಜೆಪಿ ಅಭ್ಯರ್ಥಿ ಹರೇಂದ್ರ ಅಲಿಯಾಸ್ ರಿಂಕು ಅವರ ಕಾರಿನ ಮೇಲೆ ದಾಳಿ ನಡೆದಿದ್ದು, ದಾಳಿ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಿಗರು ಪೊಲೀಸ್ ಠಾಣೆಯಲ್ಲಿ ಆಶ್ರಯ ಪಡೆದಿದ್ದಾರೆ.
ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಹರೇಂದ್ರ ಕುಮಾರ್ ಆರೋಪಿಸಿದ್ದಾರೆ.
ರೇಪ್ ಮಾತಿಗೆ ಉಲ್ಟಾ ಹೊಡೆದ ಶಾಸಕ; ಸೇಫ್ಟಿಗಾಗಿ ಹೆಲ್ಮೆಟ್ ಹಾಕುತ್ತೇವೆ, ಹಾಗೇ ಹಿಜಾಬ್ ಎಂದ ಜಮೀರ್