Kannada NewsLatestNational
*BREAKING: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಬೆಂಕಿ ಅವಘಡ: ನಾಲ್ವರು ಸಜೀವದಹನ: ಹಲವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ನಾಲ್ವರು ಸಜೀವದಹನವಾಗಿರುವ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನ ಖಾಸಗಿ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ನಲ್ಲಿ ಈ ದುರಂತ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಂಕಿ ಅವಘಡದಲ್ಲಿ ಇಡೀ ಕೋಚಿಂಗ್ ಸೆಂಟರ್ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಕಟ್ಟಡದಿಂದ ಹೊರಬರಲಾಗದೇ ನಾಲ್ವರು ಸಜೀವದಹನವಾಗಿದ್ದಾರೆ. ಹಲವರು ತಮ್ಮ ಜೀವ ಉಳಿಸಿಕೊಳ್ಳಲು ಕಟ್ಟಡದ ಮೇಲಿಂದ ಜಿಗಿದಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ರಕ್ಷಣ ಅಕಾರ್ಯಾಚರಣೆ ನಡೆಸಿದ್ದಾರೆ. ಕಟ್ಟಡದಲ್ಲಿ ಸಿಲುಕಿದವರ ಕಿರುಚಾಟ, ಚೀರಾಟ ಮುಗಿಲುಮುಟ್ಟಿದೆ.




