Kannada NewsLatest

*ವರುಣಾರ್ಭಟಕ್ಕೆ 37 ಜನರು ಬಲಿ; ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಕಟ್ಟಡಗಳು; ಉತ್ತರ ಭಾರತದ ಹಲವೆಡೆ ಪ್ರವಾಹ ಪರಿಸ್ಥಿತಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉತ್ತರ ಭಾರತದಲ್ಲಿ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ.

ಉತ್ತರ ಭಾರದಲ್ಲಿ ಮಳೆ ಅನಾಹುತದಲ್ಲಿ ಈವರೆಗೆ 37 ಜನರು ಸಾವನ್ನಪ್ಪಿದ್ದಾರೆ ಹಲವರು ಕಣ್ಮರೆಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಮಂಡಿ, ಕುಲು ಸೇರಿದಂತೆ ಹಲವೆಡೆ ಭಾರಿ ಪ್ರವಾಹವುಂಟಗೈದ್ದು, ಬೃಹತ್ ಕಟ್ಟಡಗಳು, ಮನೆಗಳು, ಸೇತುವೆಗೆಳು ಕ್ಷಣಾರ್ಧದಲ್ಲಿ ನೀರಿನಲ್ಲಿನಲ್ಲಿ ಕೊಚ್ಚಿ ಹೋಗಿವೆ.

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಂಗ್ರಾ, ಚಂಬಾ, ಹಮೀಪುರ, ಉನಾ ಸೇರಿದಂತೆ ಹಲವೆಡೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಯಮುನಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪಂಜಾಬ್, ಹರಿಯಾಣದಲ್ಲಿಯೂ ಮಳೆ ಅಬ್ಬರ ಜೋರಾಗಿದ್ದು, ಭೂ ಕುಸಿತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 44ನ್ನು ಬಂದ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button