Kannada NewsKarnataka NewsLatest

*ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: ಓರ್ವ ಪ್ರಯಾಣಿಕ ಸಾವು 9 ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಚಾಲಕನ್ ನಿಯಂತ್ರಣ ತಪ್ಪಿ ಬಲ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಿದ್ರೆ ತೂಕಡಿಸಿದ ಕಾರಣ ಚಾಲಕನಿಗೆ ನಿಯಂತ್ರಣ ತಪ್ಪಿರಬಹುದು ಎಂದು ಶಂಕಿಸಲಾಗಿದೆ. ವೇಗವಾಗಿ ಬಂದ ಬಸ್ ಹೆದ್ದಾರಿಯ ಮಧ್ಯದಲ್ಲೇ ಉರುಳಿಬಿದ್ದ ಪರಿಣಾಮ, ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button