*ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಕರ್ಕಾ ಕ್ರಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರೂಖ್ ಸಾಬ್, ಮುದಸೀರ್ ಇಸ್ಮಾಯಿಲ್ ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಂಡೇಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Home add -Advt *ಅಪ್ರಾಪ್ತ ಮಗಳನ್ನು ಕೊಲೆಗೈದು … Continue reading *ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು*