Karnataka NewsLatest

*ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು ಪ್ರದೇಶಗಳು ಅತಿ ಅಪಾಯಕಾರಿ: ಸಮಿಕ್ಷಾ ವರದಿಯಲ್ಲಿ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಮಳೆಗಾಲದಲ್ಲಿ ಶಿರೂರು ಕುಡ್ದ ಕುಸಿತ ದುರಂತದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ.

Home add -Advt

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಪ್ರದೇಶಗಳು ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದ್ದು ಇಲ್ಲಿ ಜಿಎಸ್ ಐ ಸಮೀಕ್ಷೆ ನಡೆಸಿದ್ದು, ಆತಂಕಕಾರಿ ವರದಿ ಬಹಿರಂಗವಾಗಿದೆ. ನಾಲ್ಕು ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭೂಕುಸಿತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿಯಲ್ಲಿ ಕುಮಟಾ ತಾಲೂಕಿನ ಬರ್ಗಿಯ ಕರಿಗದ್ದೆ, ಕುಮಟಾ ತಾಲೂಕಿನ ಗೋಕರ್ಣ ಭಾಗದ ತೊರ್ಕೆ ಗ್ರಾಮ, ಹೊನ್ನಾವರದ ಆಲಂಕಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ರೆಸಿಡೆನ್ಸಿಯಲ್ ಸ್ಕೂಲ್, ಯಲ್ಲಾಪುರದ ಕೊಡ್ಲಗದ್ದೆ ಭಾಗದಲ್ಲಿ ಮಣ್ಣು ಹೆಚ್ಚು ಸಡಿಲವಾಗಿದೆ. ಈ ಭಾಗದಲ್ಲಿ ಯಾವಾಗ ಬೇಕಾದರೂ ಮಣ್ಣು ಕುಸಿಯುವ ಆತಂಕ ಇದೆ ಎಂದು ಎಚ್ಚರಿಕೆ ನೀಡಿದೆ.

Related Articles

Back to top button