Kannada NewsKarnataka NewsLatest

ಖಾನಾಪುರ ಬಳಿ ಸಿಡಿಲು ಬಡಿದು ಉತ್ತರ ಕನ್ನಡದ ವ್ಯಕ್ತಿ ಸಾವು

ಪ್ರಗತಿವಾಹಿನಿ ಸುದ್ದಿ, ಖಾನಾಪುರ : ತಾಲೂಕಿನ ನಿಡಗಲ್ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಇಟ್ಟಿಗೆ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕು ಅಸು ಗ್ರಾಮದ ನಿವಾಸಿ ಗುರುನಾಥ ಪಾಂಡುರಂಗ ನಾರ್ವೇಕರ್ (20)ಎಂದು ಗುರುತಿಸಲಾಗಿದೆ. ಮೃತ ಗುರುನಾಥ ಕೆಲದಿನಗಳ ಹಿಂದೆ ಇಟ್ಟಿಗೆ ನಿರ್ಮಾಣ ಕಾರ್ಯಕ್ಕಾಗಿ ತನ್ನ ಕುಟುಂಬದೊಂದಿಗೆ ನಿಡಗಲ್ ಗ್ರಾಮಕ್ಕೆ ಆಗಮಿಸಿದ್ದರು. ಗುರುವಾರ ಸಂಜೆ ಮಳೆ ಪ್ರಾರಂಭವಾದ ಹಿನ್ನೆಲೆಯಲ್ಲಿ ತಾವು ನಿರ್ಮಿಸುತ್ತಿದ್ದ ಇಟ್ಟಿಗೆ ಭಟ್ಟಿಗೆ ಪ್ಲಾಸ್ಟಿಕ್ ಚೀಲದ ಹೊದಿಕೆ ಹೊದಿಸುವಾಗ ಅವರು ಸಿಡಿಲಿನ ಆರ್ಭಟಕ್ಕೆ ಸಿಕ್ಕು ಸ್ಥಳದಲ್ಲೇ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button