Karnataka News

*ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ*

ಬಿರುಗಾಳಿ ಸಹಿತ ಭಾರಿ ಮಳೆ, ಮತ್ತೆ ಗುಡ್ಡ ಕುಸಿತುವ ಆತಂಕ

Home add -Advt


ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ನಡುವೆ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ್ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೇ ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತದ ಭೀತಿಯಿದೆ. 439 ಭೂ ಪ್ರದೇಶಗಳು ಅತಿ ಸೂಕ್ಷ್ಮವಿರ್ರು ಯಾವ ಭಾಗದಲ್ಲಾದರೂ ಮಳೆಯಿಂದ ಗುಡ್ಡ ಕುಸಿತವಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಯಾಣಿಸುವ ಪ್ರಯಾಣಿಕರು, ಘಟ್ಟ ಭಾಗದಲ್ಲಿ ಪ್ರಯಾಣಿಸುವವರು ಎಚ್ಚರಿಕೆಯಿಂದ ಇರುವಂತೆ ವ್ಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

ಗುಡ್ಡ ಪ್ರದೇಶದಲ್ಲಿ ವಾಸಿಸುವ ಜನರು ವಿಶೇಶ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಅಂಕೋಲಾದ ಶಿರೂರು ಭಾಗದಲ್ಲಿ ಮಣ್ಣು ಸಡಿಲವಾಗಿದೆ. ಈಗಾಗಲೇ ಸಣ್ಣಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಆಭಾಗದಲ್ಲಿ ಸಂಚರಿಸುವವರು ಅಲರ್ಟ್ ಆಗಿರಬೇಕು. ಗುಡುಗು ಸಿಡಿಲು, ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಲಿದ್ದು, ಆದಷ್ಟು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ.

Related Articles

Back to top button