
ಪ್ರಗತಿವಾಹಿನಿ ಸುದ್ದಿ: ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ಜಲಸಮಾಧಿಯಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಈ ದುರಂತ ಸಂಭವಿಸಿದೆ. ಮೃತರು ಭಟ್ಕಳದ ಶಿರಾಲಿ ಮೂಲದವರು. ಕಪ್ಪೆ ಚಿಪ್ಪು ತೆಗೆಯಲು ಒಂದೇ ಕುಟುಂಬದ 14 ಜನರು ತಟ್ಟೆಹಕ್ಕಲು ನದಿಗೆ ಇಳಿದಿದ್ದರು,
ಈ ವೇಳೆ ನದಿ ನೀರಿನಲ್ಲಿ ಇಬ್ಬರು ಮುಳುಗಿದ್ದಾರೆ. ಅವರನ್ನು ರಕ್ಷಿಸಲೆಂದು ಮತ್ತೊಬ್ಬರು ಹೋಗಿದ್ದಾರೆ. ಮೂವರು ನೀರಿನಲ್ಲಿ ಮುಳುಗಿರುವುದನ್ನು ಕಂಡು ಅವರನ್ನು ರಕ್ಷಿಸಲೆಂದು ಇನ್ನೊಬ್ಬರು ಹೀಗೆ ಒಬ್ಬರ ಹಿಂದೆ ಒಬ್ಬರು ಹೋಗಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂವರು ನದಿಯಲ್ಲಿ ನಾಪತ್ತೆಯಾಗಿದ್ದಾರೆ. 8 ಜನರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ನಾಪತ್ತೆಯಾಗಿರುವವರಿಗಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.



