Karnataka News

*ಕಾಲು ಜಾರಿ ಸೇತುವೆ ಮೇಲಿಂದ ಕಾಳಿ ನದಿಗೆ ಬಿದ್ದ ಯುವಕ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಸೇತುವೆ ಮೇಲೆ ಹೋಗುತ್ತಿದ್ದಾಗ ಕಾಲು ಜಾರಿ ಯುವಕನೊಬ್ಬ ಉಕ್ಕಿ ಹರಿಯುತ್ತಿರುವ ಕಾಳಿ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸುಂಕೇರಿ ಬಳಿ ರಾತ್ರಿ ಸೇತುವೆ ಮೇಲೆ ಹೋಗುತ್ತಿದ್ದ ಯುವಕ ಏಕಾಏಕಿ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದಾನೆ. ಕಡವಾಡ ಗ್ರಾಮದ ಸಂತೋಷ್ ರಾಯ್ಕರ್ (35) ನಾಪತ್ತೆಯಾಗಿರುವ ಯುವಕ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ನದಿಯ ಹಿನ್ನೀರಿನಲ್ಲಿ ಯುವಕನಿಗಾಗಿ ಶೋಧ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button