
ಪ್ರಗತಿವಾಹಿನಿ ಸುದ್ದಿ; ಕಾರವಾರ; ಕಾರ್ ಪಲ್ಟಿಯಾಗಿ ಲೋಕೊಪಯೋಗಿ ಇಲಾಖೆ ಇಂಜಿನಿಯರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾದಲ್ಲಿ ನಡೆದಿದೆ.
ಸಿದ್ದಾಪುರದ ಲೋಕೊಪಯೋಗಿ ಇಲಾಖೆ ಎಇಇ ಮುದುಕಣ್ಣವರ್ ( 58 ) ಮೃತಪಟ್ಟವರು.
ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಶಿರಸಿ ಸಿದ್ದಾಪುರ ಮತ್ತು ಮುಂಡಗೋಡದ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಬರುತ್ತಿದ್ದರು. ಈ ವೇಳೆ ಅಂಕೋಲಾ ಸಮೀಪದ ಬಾಳೆಗುಳಿ ಕ್ರಾಸ್ ನಲ್ಲಿ ಕಾರು ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ.
ಕೋವಿಡ್ ಹಾಗೂ ನೆರೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿತ್ತು.
ಕಾರಿನಲ್ಲಿದ್ದ ಇತರ ಅಧಿಕಾರಿಗಳು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಹೆಬ್ಬಾರ್ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದರು.
ಕಾರವಾರಕ್ಕೆ ಸಭೆಗೆ ತೆರಳುತ್ತಿದ್ದ ಸಚಿವರು ಈ ಘಟನೆ ಬಗ್ಗೆ ಮಾಹಿತಿ ಪಡೆದು ತಕ್ಷಣ ಅಂಕೋಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಅಧಿಕಾರಿಗಳನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುವುದಕ್ಕೆ ಖುದ್ದು ತಾವೇ ಎಲ್ಲಾ ವ್ಯವಸ್ಥೆಯನ್ನು ಮಾಡಿದರು.
ಅಪಘಾತದಲ್ಲಿ ಮೃತರಾದ ಸಿದ್ದಾಪುರ ತಾಲೂಕಿನ ಲೋಕೋಪಯೋಗಿ ಎ.ಇ.ಇ ಮುದುಕಣ್ಣನವರ ಅವರ ಪಾರ್ಥಿವ ಶರೀರಕ್ಕೆ ಸಚಿವರು ಅಂತಿಮ ನಮನ ಸಲ್ಲಿಸಿದರು.
ಬೊಮ್ಮಾಯಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ