
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಕಳ್ಳರ ಗ್ಯಾಂಗ್ ಯತ್ನಿಸಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದಲ್ಲಿ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಕೋರರು ಬ್ಯಾಂಕ್ ದರೋಡೆಗೆ ಯತ್ನಿಸಿದ್ದಾರೆ. ಶೌಚಾಲಯದ ಗೋಡೆ ಕೊರೆದು ಬ್ಯಾಂಕ್ ಒಳಗೆ ನುಗ್ಗಿದ ಖದೀಮರು, ಸ್ಟ್ರಾಂಗ್ ರೂಂ ನ ಗೋಡೆ ಒಡೆಯಲು ಯತ್ನಿಸಿದ್ದಾರೆ. ಆದರೆ ಗೋಡೆ ಒಡೆಯಲಾಗದೇ ಖಾಲಿ ಕೈಯಲ್ಲಿ ವಾಪಸ್ ಆಗಿದ್ದಾರೆ.
ಇಂದು ಬ್ಯಾಂಕ್ ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




