ಪ್ರಗತಿವಾಹಿನಿ ಸುದ್ದಿ; ಕಾರವಾರ: ಕೊರೊನಾ ಅಟ್ಟಹಾಸದ ನಡುವೆ ಜಿಲ್ಲೆ ಜಿಲ್ಲೆಗಳಲ್ಲೂ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊಟ್ಟ ಮೊದಲ ಕಪ್ಪು ಶಿಲೀಂದ್ರ ಸೋಂಕು ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸೋಂಕಿತನನ್ನು ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಹಾಗೂ ವೈಟ್ ಫಂಗಸ್ ಲಕ್ಷಣಗಳು ಪತ್ತೆಯಾಗುತ್ತಿದ್ದು, ಕೊರೊನಾ ಚಿಕಿತ್ಸೆಗೆ ನೀಡಲಾಗುತ್ತಿರುವ ಅತಿಯಾದ ಸ್ಟಿರಾಯ್ಡ್, ಆಕ್ಸಿಜನ್ ಮೊದಲಾದ ಅಡ್ಡಪರಿಣಾಮಗಳಿಂದಾಗಿ ಶಿಲೀಂದ್ರ ಸೋಂಕು ಹೆಚ್ಚುತ್ತಿದೆ ಎನ್ನಲಾಗುತ್ತಿದೆ.
ಉತ್ತರ ಕನ್ನಡ: ವಾರದಲ್ಲಿ ಎರಡೇ ದಿನ ಖರೀದಿಗೆ ಅವಕಾಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ