ಪ್ರಗತಿವಾಹಿನಿ ಸುದ್ದಿ: ಹಸು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಮ್ಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಉತ್ತರ ಕನ್ನಡ ಎಸ್ ಪಿ ನಾರಾಯಣ ಘೋಷಿಸಿದ್ದಾರೆ.
ಕಾರವಾರದಲ್ಲಿ ಮಾತನಾದಿದ ಅವರು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದಲ್ಲಿ ಇತ್ತೀಚೆಗೆ ಗರ್ಭ ಧರಿಸಿದ್ದ ಹಸುವನ್ನು ಹತ್ಯೆ ಮಡಿ ದೇಹದ ಭಾಗ ಕೊಂಡಿಯಿದ್ದದ್ದರು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ವಾಸಿಮ್, ಮುಜಾಮ್ಮಿಲ್ ಎಂಬ ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡಲಾಗುವುದು ಎಂದರು.
ಗೋಹಂತಕರ ಸುಳಿವು ಕೊಟ್ಟವರಿಗೆ 50 ಸಾವಿರ ರೂಪಾಯಿ ಬಹುಮಾನ ನೀಡುತ್ತೇವೆ. ಇಬ್ಬುರು ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು.
ಹಸುವನ್ನು ಕಡಿದು ಆರೋಪಿಗಳು ಹಸು ಮಾಂಸವನ್ನು 7,500 ರೂ ಗೆ ಮಾರಿದ್ದರು. ಹಸುವಿನ ರಕ್ತದ ಕಲೆ ಬೆನ್ನಟ್ಟಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ