ಕೊರೊನಾ ಬೆನ್ನಲ್ಲೇ ಉತ್ತರ ಕನ್ನಡದಲ್ಲಿ ಡೆಂಗ್ಯೂ ಭೀತಿ

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ನಡುವೆ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು ಒಂದೇ ಕಡೆ ನಿಂತುಕೊಂಡಿದ್ದ ಪರಿಣಾಮ ಅದರಲ್ಲಿ ಸಂಗ್ರಹವಾಗಿದ್ದ ನೀರಿನಿಂದ ಓರಿಸ್ಸಾ ಮೂಲದ ಕಾರ್ಮಿಕರಿಗೆ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ.

ಈ ನಿಟ್ಟಿನಲ್ಲಿ ಬೈತಖೋಲಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿದ್ದು ಸದ್ಯ ಬೋಟಿನ ಕಾರ್ಮಿಕರನ್ನ ಮಾಲೀಕರ ಯೂನಿಯನ್ ಕಚೇರಿ ಹಾಗೂ ಹಾಲ್ ಗಳಲ್ಲಿ ಉಳಿದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Home add -Advt

ಇನ್ನು ರಾಜ್ಯದಲ್ಲಿ ಕೊರೊನಾ ಪೀಡಿತ ಐದು ಜಿಲ್ಲೆಗಳನ್ನು ರೆಡ್ ಝೋನ್‍ಗೆ ಸೇರ್ಪಡೆಗೊಳಿಸಲಾಗಿದ್ದು ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯೂ ಒಂದಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button