ಪ್ರಗತಿವಾಹಿನಿ ಸುದ್ದಿ; ಶಿರಸಿ: ಕೆಡಿಸಿಸಿ ಬ್ಯಾಂಕ್ (ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್) ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಉಪಾಧ್ಯಕ್ಷರಾಗಿ ಮೋಹನದಾಸ ನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಮ್ ಹೆಬ್ಬಾರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೋಹನದಾಸ ಹೊರತಾಗಿ ಬೇರಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಮುಂದಿನ 5 ವರ್ಷಗಳ ಅವಧಿಗೆ ಶಿವರಾಮ್ ಹೆಬ್ಬಾರ್ ಅಧ್ಯಕ್ಷರಾಗಿ ಹಾಗೂ ಮೋಹನದಾಸ ನಾಯಕ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ಪಕ್ಷದ ಆಧಾರದಲ್ಲಿ ಚುನಾವಣೆ ನಡೆದಿಲ್ಲ. ಪಕ್ಷಾತೀತವಾಗಿ ಆಯ್ಕೆ ನಡೆದಿದೆ. ಇದು ಶತಮಾನದ ಇತಿಹಾಸದಲ್ಲಿ ಒಳ್ಳೆಯ ಬೆಳವಣಿಗೆ. ಬ್ಯಾಂಕ್ ನ ಎಲ್ಲಾ ನಿರ್ದೇಶಕರ ಸಹಮತದೊಂದಿಗೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸಮಾಡುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ