Kannada NewsKarnataka NewsLatest

*ಕಾರಿನ ಬಿಡಿ ಭಾಗ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಕಾರಿನ ಡ್ಯಾಷ್ ಬೋರ್ಡ್ ತಯಾರಿಸುವ ಫೈಬರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ವಾಹನಗಳ ಬಿಡಿ ಭಾಗಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಯ ಘಟಕದಲ್ಲಿ ಏಕಾಏಕಿ ಬೆಂಕಿ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಕಾರ್ಖಾನೆ ಹೊತ್ತಿ ಉರಿದಿದೆ.

Home add -Advt

ಮಶಿಗದ್ದೆಯ ರಾಘವ್ ವಿಶ್ವೇಶ್ವರ ಹೆಗಡೆ ಎಂಬುವವರಿಗೆ ಸೇರಿದ ಕಾರ್ಖಾನೆ ಇದಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಹಾನಿಯುಂಟಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Related Articles

Back to top button