Latest

*ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಘಟನೆಯಲ್ಲಿ 9 ಜನ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ ಕಾಗೇರಿ, ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಹೆದ್ದಾರಿ ಮೇಲೆ ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button