ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿ 7 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಒದೆ.
ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ 7 ಜನ ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿ ಪ್ರತಿದ್ವನಿಸಿತು. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಭಾರಿ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಘಟನೆಯಲ್ಲಿ 9 ಜನ ನಾಪತ್ತೆಯಾಗಿದ್ದು, ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರಿನ ಮೇಲೆಯೇ ಗುಡ್ದ ಕುಸಿದಿದೆ. ಗುಡ್ಡ ಕುಸಿದ ರಭಸಕ್ಕೆ ಟೀ ಅಂಗಡಿಯೊಂದು ನೆಲಸಮವಾಗಿದ್ದು, ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಬಿದ್ದು ಕೊಚ್ಚಿ ಹೋಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ