*ಗುಡ್ಡ ಕುಸಿತದಲ್ಲಿ 7 ಜನರು ದುರ್ಮರಣ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿ 7 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಒದೆ. ಶಿರೂರು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ 7 ಜನ ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿ ಪ್ರತಿದ್ವನಿಸಿತು. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. … Continue reading *ಗುಡ್ಡ ಕುಸಿತದಲ್ಲಿ 7 ಜನರು ದುರ್ಮರಣ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*