*ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಘಟನೆಯಲ್ಲಿ 9 ಜನ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ ಕಾಗೇರಿ, ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. … Continue reading *ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ*