Kannada NewsKarnataka NewsLatest
*ಅಪರಿಚಿತ ವ್ಯಕ್ತಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿ-ಕುಮಟ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಗೆ 35ರಿಂದ 40 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯ ತಲೆ ಹಿಂಬದಿಯಲ್ಲಿ ಗಾಯಗಳಾಗಿವೆ. ಯಾರೋ ಕೊಲೆ ಮಾಡಿ ಶವನ್ನು ಎಸೆದು ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ವ್ಯಕ್ತಿ ಬಿಳಿ ಶರ್ಟ್ ಹಾಗೂ ಲುಂಗಿ ಹಾಕಿದ್ದು, ಶರ್ಟ್ ನಲ್ಲಿ ಬಸ್ ಟಿಕೆಟ್ ಸಹ ಪತ್ತೆಯಾಗಿದೆ. ಇನ್ನೂ ಈತ ಸೆ.28 ಗುರುವಾರದಂದು ಮುಶಿಗೇರಿಯಿಂದ ಗಂಜೇಂದ್ರಗಡಕ್ಕೆ ಪ್ರಯಾಣಿಸಿರುವ ಟಿಕೆಟ್ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪಿಎಸ್ ಐ ನವೀನ್ ನಾಯ್ಕ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.




