Latest

ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿ ನಗರದ ಕರಿಗುಂಡಿ ರಸ್ತೆಯ ಕಸದಗುಡ್ಡೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಆಬೀದ್ ತಂದೆ ಮೊಹ್ಮದ್ ರಫಿಕ್ ಎಂದು ಗುರುತಿಸಲಾಗಿದ್ದು, ಈತ ಇಂದಿರಾನಗರ ನಿವಾಸಿ ಎನ್ನಲಾಗಿದೆ.

ಬಂಧಿತನಿಂದ ಅಂದಾಜು 15,000/- ರೂ ಮೌಲ್ಯದ 504 ಗ್ರಾಂ ತೂಕದ ಗಾಂಜಾ ಮಾದಕ ವಸ್ತು , ನಗದು ಹಣ -400/- ರೂ ಹಾಗೂ ಕೃತ್ಯಕ್ಕೆ ಬಳಸಲಾದ ಅಂದಾಜು 1000/- ಮೌಲ್ಯದ ಒಪ್ಪೊ ಮೊಬೈಲ್ ಫೋನ್ ಜಪ್ತಿಪಡಿಸಿಕೊಳ್ಳಲಾಗಿದೆ.

ಶಿವಪ್ರಕಾಶ್ ದೇವರಾಜು ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ, ಬದ್ರಿನಾಥ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉ.ಕ ಕಾರವಾರ,ಶ್ರೀರವಿ ಡಿ ನಾಯ್ಕ ಡಿ.ಎಸ್.ಪಿ ಶಿರಸಿ ಉಪವಿಭಾಗ, ಬಿ.ಯು ಪ್ರದೀಪ್ ವೃತ್ತ ನಿರೀಕ್ಷಕರು ಶಿರಸಿ ರವರ ಮಾರ್ಗದರ್ಶನದಲ್ಲಿ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿ.ಎಸ್.ಐ ನಾಗಪ್ಪ ನೇತೃತ್ವದ ಸಿಬ್ಬಂದಿಗಳಾದ ಇಸ್ಮಾಯಿಲ್ ಕೋಣನಕೇರಿ,ರಾಮಯ್ಯ ಪೂಜಾರಿ,ಪ್ರದೀಪ್‌ ಕೈಟಕರ್, ಹನುಮಂತ ಮಾಕಾಪುರ, ಮೋಹನ ನಾಯ್ಕ,ರವರನ್ನು ಒಳಗೊಂಡ ತಂಡ ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

Home add -Advt

ಪೊಲೀಸ್ ಅಧೀಕ್ಷಕರಾದ ಶಿವಪ್ರಕಾಶ ದೇವರಾಜುರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

ನೈಟ್ ಕರ್ಫ್ಯೂ: ಕೊರೊನಾ ರಾತ್ರಿ ಮಾತ್ರ ಹರಡುತ್ತೆ ಅಂತ ಸರ್ಕಾರಕ್ಕೆ ಹೇಳಿದ ವಿಜ್ಞಾನಿ ಯಾರು: ಡಿ.ಕೆ.ಶಿವಕುಮಾರ್ ಪ್ರಶ್ನೆ

Related Articles

Back to top button