ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ಕಳೆದ ಬಾರಿಯ ಮಳೆ ಅಬ್ಬರಕ್ಕೆ ಉಂಟಾದ ಪ್ರವಾಹದಿಂದಾಗಿ ಚೇತರಿಸಿಕೊಳ್ಳುವ ಮೊದಲೇ ಇದೀಗ ಮತ್ತೆ ವರುಣನ ಆರ್ಭಟ ಹೆಚ್ಚಿದ್ದು, ಮಹಾರಾಷ್ಟ್ರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕಲಬುರ್ಗಿಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ 35,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಭೀಮಾನದಿ ಉಕ್ಕಿ ಹರಿಯುತ್ತಿದ್ದು, ಸುತ್ತಮುತ್ತಲ ಗ್ರಾಮಗಳು, ಜಮೀನು ಜಲಾವೃತಗೊಂಡಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಭೀಮಾನದಿ ಪಾತ್ರದತ್ತ ಜನರು ತೆರಳದಂತೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.
ಇನ್ನೊಂದೆಡೆ ಬೀದರ್ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಸೇತುವೆಗಳು ಮುಳುಗಡೆಯಾಗಿದ್ದು, ಗ್ರಾಮಗಳ ಸಂಪರ್ಕವೇ ಕಡಿತಗೊಂಡಿವೆ.
ಕೊರೊನಾ ನಡುವೆಯೇ ನಿಫಾ ವೈರಸ್ ಆತಂಕ; ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ