Belagavi NewsBelgaum NewsPolitics

*ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.

Home add -Advt

ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ

ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button