Kannada NewsLatestNational

*ಮತ್ತೊಂದು ಭೀಕರ ಅಪಘಾತ*: *6 ಮಹಿಳೆಯರು ಸೇರಿ 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಆರು ಮಹಿಳೆಯರು ಸೇರಿ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದ ಪರುಣಾಮ 6 ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. 5 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡದ ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ‘ಮ್ಯಾಕ್ಸ್’ ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಲ್ಯಾನ್ಸ್‌ಡೌನ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಶಾಲಿನಿ ಮೌರ್ಯ ಮಾಹಿತಿ ನೀಡಿದ್ದಾರೆ.

ರಿಖಾನಿಖಾಲ್‌ನಲ್ಲಿ ನಡೆದ ಗುಂಪು ಸಭೆಯಲ್ಲಿ ಭಾಗವಹಿಸಿ ಮಹಿಳೆಯರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಹಾಗೂ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯುವುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.


Related Articles

Back to top button