LatestNationalPolitics

*ಶಾಸಕರ ಮನೆಯ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ಸಾವು*

ಪ್ರಗತಿವಾಹಿನಿ ಸುದ್ದಿ: ನೂತನ ಶಾಸಕರೊಬ್ಬರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಮಾಜಿ ಸಚಿವರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ನಾಯಕ 55 ವರ್ಷದ ನಾನಕ್ ದೀನ್ ಭೂರ್ಜಿ ಶಾಸಕರ ನಿವಾಸದ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ತೀವ್ರವಾಗಿ ಗಾಯಗೊಂದಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಅವರು ಆಗಲೇ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ಬಯಲಾಗಬೇಕಿದೆ.


Home add -Advt

Related Articles

Back to top button