Kannada NewsLatestNational

*ಮತ್ತೊಂದು ಭೀಕರ ಅಪಘಾತ; 12 ಜನರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಂಟೈನರ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ಈ ದುರಂತ ಸಂಭವಿಸಿದ್ದು, 12 ಜನರು ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಕವಿದ ವಾತಾವರಣದಿಂದಾಗಿ ರಸ್ತೆ ಮಾರ್ಗ ಸರಿಯಾಗಿ ಕಾಣದೇ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button