CrimeKannada NewsLatestNational
*BREAKING: ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಯೋಧನ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹುತಾತ್ಮ ಯೋಧ ಸತ್ಯವಾನ್ ಅವರ ಪಾರ್ಥೀವ ಶರೀರವನ್ನು ಚಂಡೀಗಢದಿಂದ ದೇವಾರಿಯಾಗೆ ಸೇನಾ ಆಂಬುಲೆನ್ಸ್ ಮೂಲಕ ಸಾಗಿಸಲಾಗುತ್ತಿತ್ತು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮ ಆಂಬುಲೆನ್ಸ್ ನಲ್ಲಿದ್ದ ಹುತಾತ್ಮ್,ಯೋಧ ಸತ್ಯವಾನ್ ಪುತ್ರ ಗೌರವ್ ಸಿಂಗ್ (18), ರಾಮ್ ಸುಮುಝ್ (೫೫), ರಂಜನ್ ಸಿಂಗ್ (೩೫) ಹಾಗೂ ಆಂಬುಲೆನ್ಸ್ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



