
ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಡೆಹ್ರಾಡೂನ್ ಗೆ ಭೇಟಿ ನೀಡಿದ ಕೇಜ್ರಿವಾಲ್, ಉತ್ತರಾಖಂಡ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ 6 ತಿಂಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ ಮಾಡುತ್ತೇವೆ. ಇದರ ಹೊರತಾಗಿ ನಿರುದ್ಯೋಗಿಗಳಿಗೆ ತಿಂಗಳಿಗೆ 5000 ರೂ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, ರಾಜ್ಯದಲ್ಲಿ ಶೇ.80ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲು, ಉದ್ಯೋಗ ಹಾಗೂ ವಲಸೆಗೆ ಸಂಬಂಧಿಸಿದಂತೆ ಸಚಿವಾಲಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ಉತ್ತರಾಖಂಡ್ ನಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಉದ್ಯೋಗಕ್ಕಾಗಿ ಯುವಜನತೆ ವಲಸೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಲ್ಲಿನ ಜನರಿಗೆ ಇಲ್ಲಿಯೇ ಉದ್ಯೋಗ ಸಿಗುವಂತಾಗಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗ ಸಮಸ್ಯೆ ನೀಗಿಸುವುದಾಗಿ ಭರವಸೆ ನೀಡಿದ್ದಾರೆ.
ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ