ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಭಾರೀ ಹಿಮಕುಸಿತದಿಂದಾಗಿ ದೌಲಿಗಂಗಾ ನದಿಯಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಹಲವು ಮನೆಗಳು ಕೊಚ್ಚಿ ಹೋಗಿರುವ ಘಟನೆ ಉತ್ತರಾಖಂಡ ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ನಡೆದಿದೆ.
ಭಾರೀ ಹಿಮಪಾತದಿಂದಾಗಿಋಷಿ ಗಂಗಾ ಯೋಜನೆಯ ಪವರ್ ಪ್ರಾಜೆಕ್ಟ್ ಗೂ ಹಾನಿಯಾಗಿದ್ದು, ತಪೋವನ ಪ್ರದೇಶದಲ್ಲಿ ದೌಲಿಗಂಗಾ ನದಿ ಉಕ್ಕಿ ಹರಿದಿದೆ. ಪರಿಣಾಮ ಮನೆಗಳು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಹಲವಾರು ಕಾರ್ಮಿಕರು ಕುಡ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಚಳಿಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ