ಉತ್ತರ ಕನ್ನಡದ ನಾಲ್ವರು ಕೊರೊನಾ ಸೋಂಕಿತರು ಗುಣಮುಖ

ಪ್ರಗತಿವಾಹಿನಿ ಸುದ್ದಿ; ಕಾರವಾರ: ಒಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಬೇಸರದ ಸಂಗತಿಯಾದರೆ, ಕೆಲ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವುದು ನಿಜಕ್ಕೂ ಸಂತಸದ ವಿಚಾರ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪತಂಜಲಿ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.

ಭಟ್ಕಳ ಮೂಲದ 8 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ತಕ್ಷಣ ಜಿಲ್ಲಾಡಳಿತ ಅವರಿಗೆ ಭಟ್ಕಳ ತಾಲೂಕು ಆಸ್ಪತ್ರೆಯಿಂದ ಕಾರವಾರ ತಾಲೂಕಿನ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಸೋಂಕಿತರು ಇದೀಗ ಗುಣಮುಖರಾಗಿದ್ದು, ಇಂದು ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಳಿದ ಇಬ್ಬರು ಸಹ ಒಂದೆರಡು ದಿನದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ಇತ್ತೀಚೆಗೆ ಕೊರೊನಾ ಪತ್ತೆಯಾದ ಗರ್ಭಿಣಿಗೆ ಉಡುಪಿಯಲ್ಲಿ ಚಿಕಿತ್ಸೆ ಕೊಡುತ್ತಿರುವುದರಿಂದ ಜಿಲ್ಲೆಯಲ್ಲಿರುವ ಬಹುತೇಕ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಇದಲ್ಲದೇ ಈ ಮಹಿಳೆಯ ಆರೋಗ್ಯ ಸಹ ಸುಧಾರಿಸಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button