ಪ್ರಗತಿವಾಹಿನಿ ಸುದ್ದಿ; ಶಿರಸಿ: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಒಟ್ಟು 15 ಜನರನ್ನು ವಶಕ್ಕೆ ಪಡೆದಿದ್ದಾರೆ.
ಶಿರಸಿ ಉಪವಿಭಾಗದ ಡಿಸಿಪಿ ರವಿ ಡಿ. ನಾಯ್ಕ್ ಹಾಗೂ ಶಿರಸಿ ವೃತ್ತ CPI ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚಾರಣೆಯಲ್ಲಿ 15 ಜನರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಪ್ರಕ್ರಿಯೆಗೆ ವೈದ್ಯಕೀಯ ಪರೀಕ್ಷೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ನ್ಯೂ ಮಾರ್ಕೆಟ್ ಪೊಲೀಸ್ ಠಾಣಾ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ ಪೆನ್ನೇಕರ್ ಈ ಕಾರ್ಯವನ್ನು ಪ್ರಶಂಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನವ ದಂಪತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ