*ಉತ್ತರಾಖಂಡ ಹೆಲಿಕಾಪ್ಟರ್ ದುರಂತ*: *ಐವರು ಕನ್ನಡಿಗರ ಪಾರ್ಥಿವ ಶರೀರ ಬೆಂಗಳೂರಿಗೆ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಐವರು ಕನ್ನಡಿಗರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಪ್ರತಾಪ್ ಗೌಡ, ಹೆಚ್.ಎಸ್. ನಟರಾಜ್, ಶಂಕರ್ ಗೌಡ ಮತ್ತು ಕೆ. ಸುಧೀರ್ ಅವರ ಮೃತದೇಹಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬಳಿಕ ಆಂಬುಲೆನ್ಸ್ ಮೂಲಕ ಅವರವರ ಊರುಗಳಿಗೆ ರವಾನಿಸಲಾಯಿತು. ಬೆಳಗಾವಿಯ ಸಿಸಿಬಿ ಇನ್ಸ್‌ಪೆಕ್ಟರ್ ಆಗಿದ್ದ ಅರುಣ್ ಸಾಲುಂಕೆ ಅವರ ಮೃತದೇಹವನ್ನು ನೇರವಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ಐವರು … Continue reading *ಉತ್ತರಾಖಂಡ ಹೆಲಿಕಾಪ್ಟರ್ ದುರಂತ*: *ಐವರು ಕನ್ನಡಿಗರ ಪಾರ್ಥಿವ ಶರೀರ ಬೆಂಗಳೂರಿಗೆ*