ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ರೈಲಿನ ಸಿ-4 ಕಂಪಾರ್ಟ್ ಮೆಂಟ್ ಸಂಪೂರ್ಣ ಹೊತ್ತಿ ಉರಿದಿದೆ.
ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪ್ರಯಾಣಿಕರನ್ನು ಬೇರೆ ಬೋಗಿಗಳಿಗೆ ಶಿಫ್ಟ್ ಮಾಡಲಾಗಿದ್ದು ಹಲವರನ್ನು ಕೆಳಗೆ ಇಳಿಸಲಾಗಿದೆ.
ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಉತ್ತರಾಖಂಡ ಡಿಸಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ