ಪ್ರಗತಿವಾಹಿನಿ ಸುದ್ದಿ; ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡ ಪರಿಣಾಮ ದೌಲಿಗಂಗಾನದಿಯಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಪ್ರವಾಹದ ಅಬ್ಬರಕ್ಕೆ 150ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಚಮೋಲಿಯಲ್ಲಿ ಒಂದೆಡೆ ಭಾರೀ ಹಿಮಪಾತವಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೊಂದೆಡೆ ಎರಡು ಬ್ರಿಡ್ಜ್ ಗಳು ಒಡೆದು ಹೋಗಿದ್ದು ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಹೇಳಲಾಗಿದೆ. ದೌಲಿ ನದಿಯ ಡಿಢೀರ್ ಪ್ರವಾಹಕ್ಕೆ ನಿಖರ ಕಾರಣ ತಿಲಿದುಬಂದಿಲ್ಲ. ಆದರೆ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಹಲವು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, 150ಕ್ಕೂ ಹೆಚ್ಚು ಜನರು ನಾಪತ್ತೆಯಗೈದ್ದಾರೆ.
ದೌಲಿಗಂಗಾನದಿ ಪ್ರವಾಹದಿಂದಾಗಿ ರೈಣಿ ಗ್ರಾಮ ಮುಳುಗಡೆ ಭೀತಿಯಲ್ಲಿದೆ. ಇನ್ನು ಅಲಕನಂದಾ ನದಿಯಲ್ಲೂ ಪ್ರವಾಹ ಹೆಚ್ಚುತ್ತಿದ್ದು, ನದಿ ತಟದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಇನ್ನು ಹರಿದ್ವಾರ, ಋಷಿಕೇಶ, ರುದ್ರಪ್ರಯಾಗ್, ಕರ್ಣಪ್ರಯಾಗ್, ಚಮೋಲಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ