Latest

ಹಿಮಪಾತದಿಂದ ಭೀಕರ ಪ್ರವಾಹ ಹಿನ್ನೆಲೆ; ಮೂರು ಮೃತದೇಹ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉತ್ತರಾಖಂಡ್ ನಲ್ಲಿ ಸಂಭವಿಸಿದ ಹಿಮಪಾತದಿಂದಾದ ಪ್ರವಾಹಕ್ಕೆ ಸಿಲುಕಿ 150ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಇದೀಗ ಮೂವರ ಮೃತ ದೇಹ ಪತ್ತೆಯಾಗಿದೆ.

ಉತ್ತರಾಖಂಡ್ ನಲ್ಲಿ ಸಂಭವಿಸುತ್ತಿರುವ ಭಾರೀ ಹಿಮಪಾತಕ್ಕೆ ದೌಲಿಗಂಗಾ, ಅಲಕನಂದಾ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ನದಿ ಪಾತ್ರದ ಗ್ರಾಮಗಳು ಮುಳುಗಡೆಯಾಗಿವೆ. ಪ್ರವಾಹದಿಂದಾಗಿ ರಿಷಿ ಗಂಗಾ ಯೋಜನೆಯ ಪವರ್ ಪ್ರಾಜೆಕ್ಟ್ ಹಾನಿಯಾಗಿದೆ. ನೂರಾರು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಪ್ರಸ್ತುತ ಮಾಹಿತಿ ಪ್ರಕಾರ ಮೂರು ಮೃತದೇಹ ಪತ್ತೆಯಾಗಿದೆ. ಅಪಾಯಕ್ಕೆ ಸಿಲುಕಿರುವ ಗ್ರಾಮಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button