ಪ್ರಗತಿವಾಹಿನಿ ಸುದ್ದಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕೋಮು ಸಂಘರ್ಷಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಹಲವು ಮನೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಮುಸಂಘರ್ಷಕ್ಕೆ ಸಂಬಂಧಿಸಿದಂತೆ ಈವರೆಗೆ 30 ಜನರನ್ನು ಬಂಧಿಸಲಾಗಿದೆ.
ಬಹ್ರೈಚ್ ನ ಮಹ್ಸಿ ವಿಭಾಗದಲ್ಲಿ ಸಾಗುತ್ತಿದ್ದ ಮೆರವಣಿಗೆಯಲ್ಲಿ ಏಕಾಏಕಿ ಕಲ್ಲುತೂರಾಟ ನಡೆದಿದ್ದು, ಗುಂಡಿನ ದಾಳಿ ಕೂದ ನಡೆದಿದೆ. ಈ ವೇಳೆ ಘರ್ಷಣೆ ಭುಗಿಲೆದ್ದು ಹಿಂಸಾಚಾರಕ್ಕೆ ತಿರುಗಿದೆ. ಜಿಲ್ಲಾಡಳಿತ ಮೆಹ್ಸಿ ಪ್ರದೇಶದಲ್ಲಿ ಇಂತರ್ ನೆಟ್ ಸ್ಥಗಿತಗೊಳಿಸಿದ್ದು, ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ