Kannada NewsLatestNational

*ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಎರಡು ಕಿಡಕಿಗಳು ಛಿದ್ರ ಛಿದ್ರಗೊಂಡಿವೆ. ಕಟ್ಟಡದ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಘಟನೆ ನಡೆದ ಸಂದರ್ಭದಲ್ಲಿ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ಇನ್‌ಸ್ಪೆಕ್ಟರ್ ಹಾಗೂ ಇತರ ಸಿಬ್ಬಂದಿಗೆ ಆರ್ಡರ್ ತಲುಪಿಸಲು ಡೆಲಿವರಿ ಏಜೆಂಟ್ ಆಗಮಿಸಿದ್ದರು. ಈ ವೇಳೆ ಠಾಣೆಯಲ್ಲಿ ಸ್ಫೋಟ ಸಂಭವಿಸಿದ್ದು, ಡೆಲಿವರಿ ಏಜೆಂಯ್ಟ್ ಕುಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಏಕಾಏಕಿ ಸ್ಫೋಟ ಸಂಭವಿಸಿದ ಪರಿಣಾಮ ಗಾಜಿನ ಚೂರುಗಳು ತಗುಲಿ ಡೆಲಿವರಿ ಏಜೆಂಟ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಸುಂಧರಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ರಾತ್ರಿ ಸುಮಾರು 9 ಗಂಟೆಗೆ ಸಂಭವಿಸಿದ ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯ ಎರಡು ಗಾಜಿನ ಕಿಟಕಿಗಳು ಪುಡಿಪುಡಿಯಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪಟಾಕಿಯೊಂದು ಪೊಲೀಸ್ ಔಟ್‌ಪೋಸ್ಟ್‌ನ ಎಸಿ ಯೂನಿಟ್‌ಗೆ ಬಿದ್ದ ಪರಿಣಾಮ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಸ್ಥಳವನ್ನು ಸುತ್ತುವರಿದಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಹಾಗೂ ಭಯೋತ್ಪಾದನಾ ನಿಗ್ರಹ ದಳದ (ATS) ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ .ಸ್ಥಳದಿಂದ ಸಂಗ್ರಹಿಸಲಾದ ಎಲ್ಲಾ ವಿಧಿವಿಜ್ಞಾನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಆಗ್ರಾಕ್ಕೆ ಕಳುಹಿಸಲಾಗಿದೆ.


Related Articles

Back to top button