
ಪ್ರಗತಿವಾಹಿನಿ ಸುದ್ದಿ: ಡಿಜೆ ಸೌಂಡ್ ನಿಂದ 2ನೇ ತರಗತಿ ವಿದ್ಯಾರ್ಥಿಯೊಬ್ಬಳು ಶಾಲೆಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಾಲೆಯ ಮುಂಭಾಗ ಡಿಜೆ ಮೆರವಣಿಗೆ ಹಾದುಹೋದ ಕೆಲವೇ ಸಮಯದಲ್ಲಿ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ತರಗತಿಯಲ್ಲಿದ್ದ ಸಿಸಿಟಿವಿಯಲ್ಲಿ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ ವಿಡಿಯೋ ಸೆರೆಯಾಗಿದೆ.
ಉತ್ತರ ಪ್ರದೇಶದ ಬಲರಾಮ್‌ಪುರದಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಂಭಾಗದಲ್ಲಿ ಮೂರ್ತಿ ವಿಸರ್ಜನಾ ಮೆರವಣಿಗೆಯೊಂದು ಸಾಗುತ್ತಿತ್ತು. ಈ ವೇಳೆ ಕಿವಿಗಡಚಿಕ್ಕುವ ಡಿಜೆ ಹಾಕಲಾಗಿತ್ತು. ಆ ಶಬ್ಧ ಶಾಲೆಯ ಒಳಗೆಲ್ಲ ಪ್ರತಿಧ್ವನಿಸಿತ್ತು. ಈ ವೇಳೆ ಕೆಲವು ಮಕ್ಕಳು ಕಿಟಕಿ ಬಳಿ ನಿಂತು ಮೆರವಣಿಗೆ ನೋಡುತ್ತಿದ್ದರು. ಅದೇ ಸಮಯದಲ್ಲಿ ಬಾಲಕಿ ತೀವ್ರ ಅಸ್ವಸ್ಥತೆ ಉಂಟಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ.
ಮೃತ ಬಾಲಕಿಗೆ ಈ ಮೊದಲು ಮೂರು ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದಳು ಎಂದು ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ. 3ನೇ ಹೃದಯಾಘಾತದ ನಂತರ ಆಕೆಯ ಸ್ಥಿತಿ ಗಂಭೀರವಾಯಿತು. ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



