Latest

ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾದಲ್ಲಿ BJP, ಪಂಜಾಬ್​ನಲ್ಲಿ AAP ಮುನ್ನಡೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಡೀ ದೇಶದ ಗಮನ ಸೆಳೆದಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಹಾಗೂ ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರವರೆಗೆ 7 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. 403 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಒಟ್ಟು 4,441 ಅಭ್ಯರ್ಥಿಗಳ ಭವಿಷ್ಯ ಇಂದಿನ ಫಲಿತಾಂಶ ನಿರ್ಧರಿಸುತ್ತದೆ. ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದ್ದು, ಸಮಾಜವಾದಿ ಪಕ್ಷ ಕೆಲವೆಡೆ ಜಯಗಳಿಸಲಿದೆ ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ 232 , ಎಸ್ ಪಿ 100, ಬಿಎಸ್ ಪಿ 6, ಐ ಎನ್ ಸಿ 3, ಇತರೆ 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಗೋವಾದಲ್ಲಿ ಬಿಜೆಪಿ 21, ಕಾಂಗ್ರೆಸ್ 12, ಟಿಎಂಸಿ 6, ಆಪ್ 1, ಇತರೆ 5 ಸ್ಥಾನಗಳಲ್ಲಿ ಮುನ್ನಡೆ
ಉತ್ತರಾಖಂಡ್ ಬಿಜೆಪಿ 44, ಕಾಂಗ್ರೆಸ್ 22, ಯುಕೆಡಿ 1, ಇತರೆ 3
ಪಂಜಾಬ್ ಆಪ್ 56, ಕಾಂಗ್ರೆಸ್ 37, ಎಸ್ ಎ ಡಿ 16, ಬಿಜೆಪಿ 7 ಇತರೆ 1
ಮಣಿಪುರದಲ್ಲಿ ಬಿಜೆಪಿ 25, ಕಾಂಗ್ರೆಸ್ 12, ಎನ್ ಪಿಪಿ 8, ಎನ್ ಪಿ ಎಫ್ 6 ಇತರೆ 8 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button