ಪ್ರಗತಿವಾಹಿನಿ ಸುದ್ದಿ; ಲಕ್ನೌ: ದಲಿತ ಸಹೋದರಿಯರಿಬ್ಬರನ್ನು ಹೊತ್ತೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖಿಂಪೂರ್ ನಲ್ಲಿ ನಡೆದಿದೆ.
ಊರಹೊರಗೆ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯರ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆಗೈದು ಬಳಿಕ ಆತ್ಮಹತ್ಯೆ ರೀತಿಯಲ್ಲಿ ಬಿಂಬಿಸಲು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಬಾಲಕಿಯರಿಬ್ಬರನ್ನು ದುಷ್ಕರ್ಮಿಗಳು ಮನೆಯಿಂದ ಹೊತ್ತೊಯ್ದು ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮಕ್ಕಳ ಸಾವಿಗೆ ನ್ಯಾಯಕೊಡಿಸುವಂತೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಈ ನಡುವೆ ಪ್ರಕರಣ ಸಂಬಂಧ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿದಂತೆ 7 ಜನರ ವಿರುದ್ಧ FIR ದಾಖಲು
https://pragati.taskdun.com/latest/actress-shreeleelamotherfir-fileagainestswarnalata/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ