Kannada NewsLatestNational

*BREAKING NEWS ಉತ್ತರಾಖಂಡ: ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸಂಪೂರ್ಣ ಯಶಸ್ವಿ*

ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತಂದ ರಕ್ಷಣಾ ತಂಡ


ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಉತ್ತರಾಖಂಡ್ ನ ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಶಸ್ವಿಯಾಗಿದ್ದು, ಶತಕೋಟಿ ಭಾರತೀಯರ ಪ್ರಾರ್ಥನೆ ಕೊನೆಗೂ ಫಲಿಸಿದೆ.

ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರ ತರಲಾಗಿದೆ. 41 ಕಾರ್ಮಿಕರು ಆರೋಗ್ಯವಾಗಿದ್ದು, ಯಾವುದೇ ಸಮಸ್ಯೆಯೂ ಆಗದಂತೆ ಸುರಕ್ಷಿತವಾಗಿ ಹೊರತರಲಾಗಿದೆ.

ಸುರಂಗ ಮಾರ್ಗ ನಿರ್ಮಾಣ ವೇಳೆ ನಿರ್ಮಾಣ ಹಂತದ ಸುರಂಗ ಕುಸಿದಿದ್ದರಿಂದ ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದರು. ಕಳೆದ 17 ದಿನಗಳಿಂದ ಸುರಂಗದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದರು. ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲು ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ನಿರಂತರವಾಗಿ ಶ್ರಮಿಸಿತ್ತು. ಪಿಎಂಒ ನೇತೃತ್ವದಲ್ಲಿ ನಡೆದಿದ್ದ ಕಾರ್ಮಿಕರ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ವಿವಿಧ ರಾಜ್ಯಗಳ ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button