
ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮ್ಮ ಬೆಂಬಲಿಗರಿಗೆ ಶಾಕ್ ನೀಡಿದ್ದು, ರಾಜಕೀಯದಿಂದಲೇ ನಿವೃತ್ತಿ ಘೋಷಿಸಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಶಶಿಕಲಾ ನಟರಾಜನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಶಶಿಕಲಾ ನಟರಾಜನ್ ಬಿಡುಗಡೆಯಾಗಿರುವುದು, ತಮಿಳುನಾಡು ರಾಜಕೀಯದಲ್ಲಿ ಹೊಸ ವಿದ್ಯಮಾನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೀಗ ಶಶಿಕಲಾ ಏಕಾಏಕಿ ರಾಜಕೀಯಕ್ಕೇ ಗುಡ್ ಬೈ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಶಿಕಲಾ ನಟರಾಜನ್ ತಾವು ರಾಜಕೀಯ ರಂಗದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ