ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಮುಂದಿನ ಮೂರು ವರ್ಷಕ್ಕೂ ಯಡಿಯೂರಪ್ಪನವರೇ ಸಿಎಂ ಆಗಿರಲಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತ ಚರ್ಚೆಯೇ ಇಲ್ಲ. ಬಿಎಸ್ ವೈ ಅವರ ಹೆಸರಿನಲ್ಲಿಯೇ ಪ್ರಣಾಳಿಕೆ ಮಾಡಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿದ್ದೇವೆ. ಅವರ ನೇತೃತ್ವದಲ್ಲಿ ಒಂದು ವರ್ಷದಲ್ಲಿ ಬಂದಿರುವ ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಪ್ರಕೃತಿ ವಿಕೋಪ, ಕೋವಿಡ್ ಸಮಸ್ಯೆ ಎಲ್ಲವನ್ನು ಹತೋಟಿಗೆ ತರಲು ಯಡಿಯೂರಪ್ಪ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ ಎಂದರು.
ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬೇಡ. ಮುಂದಿನ ಚುನಾವಣೆಯನ್ನೂ ಯಡಿಯೂರಪ್ಪ ನೇತೃತ್ವದಲ್ಲಿಯೇ ನಾವು ಎದುರಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಈ ವಿಚಾರದಲ್ಲಿ ಪಕ್ಷ ಹಾಗೂ ಬೇರೆಯವರೂ ಯಾರೂ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ