Belagavi NewsBelgaum NewsKannada NewsKarnataka News

*ಮಹಾವೀರ ಜಯಂತಿಯಲ್ಲಿ ಗಮನ ಸೇಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೊ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾವೀರ ಜಯಂತಿ ಮೇರವಣಿಗೆ ವೇಳೆ ಧರ್ಮಸ್ಥಳ ಬುರುಡೆ ಪ್ರಕರಣ ಗಮನ ಸೆಳೆದಿದೆ. ಮಹಾವೀರ ಜಯಂತಿ ಪ್ರಯುಕ್ತ ಧರ್ಮಸ್ಥಳ ಬುರುಡೆ ಪ್ರಕರಣದ ವಿಶೇಷ ಟ್ಯಾಬ್ಲೊವನ್ನು ಸಿದ್ಧಪಡಿಸಲಾಗಿತ್ತು.

 ಕುಂದಾನಗರಿ ಬೆಳಗಾವಿಯಲ್ಲಿ ಮಹಾವೀರ ಜಯಂತಿ ಮೆರವಣಿಗೆಯಲ್ಲಿ ಸತ್ಯಕ್ಕೆ ಜಯ ಸುಳ್ಳಿಗೆ ಸೋಲು ಎನ್ನುವ ನ್ಯಾಯ ತಕ್ಕಡಿಯನ್ನು ಪ್ರದರ್ಶನ ಮಾಡಲಾಗಿದೆ. ತಕ್ಕಡಿಯಲ್ಲಿ ಒಂದು ಕಡೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾವಚಿತ್ರವನ್ನು ಹಾಕಲಾಗಿದ್ದು, ಇನ್ನೊಂದು ಕಡೆ ಧರ್ಮಸ್ಥಳ ವಿರುದ್ಧ ಬುರುಡೆ ಕಥೆ ಕಟ್ಟಿದ್ದ ಆರೋಪಿ ಮುಸುಕುಧಾರಿ ಸೇರಿ ಮೂವರ ಭಾವಚಿತ್ರವನ್ನು ಹಾಕಲಾಗಿತ್ತು.

Home add -Advt

ಬೆಳಗಾವಿ ನಗರದ ಜೈನ ಸಮುದಾಯದಿಂದ ಆಯೋಜಿಸಿದ್ದ ಮಹಾವೀರ ಜಯಂತಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ್, ಮಾಜಿ ಶಾಸಕ ಸಂಜಯ ಪಾಟೀಲ್, ಮೇಯರ್, ಉಪ ಮೇಯರ್ ಭಾಗಿಯಾಗಿದ್ದರು. ಈ ವೇಳೆ ಮಂಜುನಾಥ ಆಶೀರ್ವಾದದಿಂದ ಧರ್ಮಸ್ಥಳಕ್ಕೆ ಅಂಟಿದ್ದ ಕಳಂಕ ನಿವಾರಣೆ ಎಂಬ ಸಂದೇಶ ರವಾನೆ ಮಾಡಲಾಗಿದೆ.

Related Articles

Back to top button