Latest

8-10 ದಿನದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ನಾಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಲಿದ್ದು, ಈ ನಡುವೆ ವಸತಿ ಸಚಿವ ವಿ.ಸೋಮಣ್ಣ ಸಂಪುಟ ಪುನಾರಚನೆಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

ಪುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿ.ಸೋಮಣ್ಣ, ಆರ್.ಆರ್.ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಶೀಘ್ರದಲ್ಲಿ ಸಂಪುಟದಲ್ಲಿ ಸ್ಥಾನ ಸಿಗಲಿದೆ ಮುಂದಿನ 8-10 ದಿನಗಳಲ್ಲಿ ಮುನಿರತ್ನ ಸಚಿವರಾಗಲಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ್ದಾರೆ.

ಕ್ಷೇತ್ರದಲ್ಲಿ ಮುನಿರತ್ನ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸುತ್ತಿದ್ದಾರೆ. ಉತಮ ಅಭಿವೃದ್ಧಿ ಕೆಲಸ ನಡೆಯಬೇಕು ಎಂದರೆ ಮುನಿರತ್ನ ಅವರಂತಹ ಶಾಸಕರು ಸಚಿವರಾಗಬೇಕು. ಮುನಿರತ್ನ ಅವರು ಮಂತ್ರಿಯಾಗಲಿ ನಂತರ ನಾವಿಬ್ಬರೂ ಒಟ್ಟಿಗೆ ಬಂದು ರಾಜರಾಜೇಶ್ವರಿ ತಾಯಿ ದರ್ಶನ ಪಡೆಯುತ್ತೇವೆ ಎಂದು ಹೇಳಿದರು.

17 ಜನ ಬಂದ ನಂತರ ಬಿಜೆಪಿಯಲ್ಲಿ ಗೊಂದಲ: ಈಶ್ವರಪ್ಪ ಬಹಿರಂಗ ಹೇಳಿಕೆ (ವಿಡಿಯೋ ಸಹಿತ)

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button