LatestUncategorized
*ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸಚಿವ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ; ಸಿಎಂ ಬೊಮ್ಮಾಯಿ ಸಾಥ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಹಲವು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಇಂದು ವರುಣಾದಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಸಚಿವ ಸೋಮಣ್ಣ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ