Karnataka NewsLatestPolitics

*ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಮೆಟ್ರೋದಲ್ಲಿ ಪ್ರಯಾಣಿಸಿದ ಕೇಂದ್ರ ಸಚಿವ ಸೋಮಣ್ಣ, ಸಂಸದ ಪಿ.ಸಿ.ಮೋಹನ್*

ಪ್ರಗತಿವಾಹಿನಿ ಸುದ್ದಿ: ಮಿತ ವ್ಯಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪಿ.ಸಿ.ಮೋಹನ್ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಗಮನ ಸೆಳೆದರು.

ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪಿ.ಸಿ.ಮೋಹನ್ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

Home add -Advt

ಬೆಂಗಳೂರಿನ ಎಂ.ಜಿ ರಸ್ತೆ ಮೆಟ್ರೋ ಸ್ಟೇಷನ್‌ನಿಂದ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್‌ವರೆಗೆ ಸಚಿವ ಸೋಮಣ್ಣ ಹಾಗೂ ಸಂಸದ ಪಿ.ಸಿ.ಮೋಹನ್ ಮೆಟ್ರೋದಲ್ಲಿ ಸಂಚರಿಸಿದರು. ಈ ವೇಳೆ ಮಾತನಾಡಿದ ವಿ.ಸೋಮಣ್ಣ, ಇಂಧನ ಉಳಿತಾಯ, ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವುದು ಹಾಗೂ ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಪ್ರಯಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Related Articles

Back to top button