
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಬಿಜೆಪಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ವಸತಿ ಸಚಿವ ವಿ.ಸೋಮಣ್ಣ ಹಾಗೂ ಸಚಿವ ಆರ್.ಅಶೋಕ್ ಅವರಿಗೆ ಎರಡು ಕ್ಷೇತ್ರಗಳ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ನಿರೀಕ್ಷೆ ಇರಲಿಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ವರಿಷ್ಠರ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ. ಕಳೆದ 40 ವರ್ಷಗಳಿಂದ ಅನೇಕ ಅಭಿವೃದ್ದಿ ಕೆಲಸ ಮಾಡಿದ್ದೇನೆ. ನಗರ ಪಾಲಿಕೆ ಸದಸ್ಯ, ಶಾಸಕ, ಸಚಿವನಾಗಿ ಕೆಲಸ ಮಾಡಿದ್ದೇನೆ ಇಂತಹ ಸಂದರ್ಭ ಬರುತ್ತೆ ಎಂದು ಕನಸಲ್ಲೂ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ನೂರಕ್ಕೆ ನೂರರಷ್ಟು ವರಿಷ್ಠರ ತೀರ್ಮಾನ ಸ್ವಾಗತಿಸುತ್ತೇನೆ. ಯಾರೂ ಕೂಡ ದೃತಿಗೆಡಬೇಕಿಲ್ಲ. ಎಲ್ಲಾ ವಿಧಿಯ ನಿಯಮ. ಭಗವಂತ ಯಾರಿಗೆ ಏನು ಕೊಡಬೇಕೋ ಅದನ್ನು ಕೊಡುತ್ತಾನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ